ದಾವಣಗರೆ : 1997 ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿದ್ದ ಹರಪನಹಳ್ಳಿ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕೊನೆಗೂ ಜಯಸಿಕ್ಕಿದೆ.

ಜಿಲ್ಲಾ ಪಂಚಾಯಿತಿ ಅಧಿಸೂಚನೆ ಹಾಗೂ ಗಜೆಟ್ ನೋಟಿಫಿಕೇಷನ್ ತಲುಪಿದ್ದು, ಮಧ್ಯರಾತ್ರಿ 12 ಗಂಟೆಗೆ ಹರಪ್ಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹರಪ್ಪನಹಳ್ಳಿ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿತ್ತು. ಕೊನೆಗೂ ಆಡಳಿತದ ಅಧಿಕೃತ ದಾಖಲೆ ಸಂಪೂರ್ಣ ಬಳ್ಳಾರಿಗೆ ಹಸ್ತಾಂತರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ. 371 (ಜೆ) ವಿಶೇಷ ಸ್ಥಾನಮಾನ ಹರಪ್ಪನಹಳ್ಳಿ ತಾಲೂಕಿಗೆ ಲಭ್ಯವಾಗಲಿದೆ.