ಚಿತ್ರದುರ್ಗ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಆಗಮಿಸಿರೋ ಜನರನ್ನು ಜಿಲ್ಲಾಡಳಿತ ಚಿತ್ರದುರ್ಗ ನಗರದ ಎಸ್ಸಿ, ಎಸ್ಟಿ ಹಾಸ್ಟೆಲ್ ಗಳಲ್ಲಿ ಹಾಗೂ ನಗರದ ಕೆಲ ಭಾಗಗಳಲ್ಲಿ ಹೋಂ ಕ್ವಾರಂಟೈನ್ ನಲ್ಲಿ ಇದ್ದವರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಟ್ಟಿತ್ತು.

ಇಂದು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ. ರಾಧಿಕಾ ಅವರು ನಲ್ಲಿದ್ದವರನ್ನು ಭೇಟಿ ಮಾಡಿ, ಅವರಿಗೆ ಬಿಸ್ಕೇಟ್ ಹಾಗೂ ನೀರಿನ ಬಾಟಲ್ ವಿತರಿಸುವ ಮೂಲಕ ಅವರ ಕುಂದು ಕೊರತೆಯನ್ನು ವಿಚಾರಿಸಿದರು ಹಾಗೂ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.!