ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಪ್ರಧಾನಿಯಾದ ಕೂಡಲೇ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಿ ಬೀಳಲಿದೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. 

 ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಎದ್ದಿದೆ. ಸಚಿವರು ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಜನರ ಪಾಲಿಗಂತೂ ರಾಜ್ಯ ಸರ್ಕಾರ ಸತ್ತು ಹೋಗಿದೆ. ಇಂತಹ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿಯನ್ನು ಗೆಲ್ಲಿಸಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದರು.