ಶೌಚಾಲಯಕ್ಕೆ ಹೋಗಿ ಬಂದ ನಂತರ

ಮಗುವಿನ ಡೈಪರ್‌ ಬದಲಾಯಿಸಿದ ನಂತರ ಮತ್ತು ಶೌಚಾಲಯಕ್ಕೆ ಹೋಗಲು ಮಗುವಿಗೆ ಸಹಾಯಮಾಡಿದ ನಂತರ

ಗಾಯಕ್ಕೆ ಔಷಧಿ ಹಚ್ಚುವ ಮುಂಚೆ ಮತ್ತು ನಂತರ

ಕಾಯಿಲೆ ಬಿದ್ದವರನ್ನು ಭೇಟಿಯಾಗುವ ಮುಂಚೆ ಮತ್ತು ನಂತರ

ಆಹಾರವನ್ನು ತಯಾರಿಸುವ, ಬಡಿಸುವ ಮತ್ತು ತಿನ್ನುವ ಮುಂಚೆ

ಕೆಮ್ಮಿದ, ಸೀನಿದ ಮತ್ತು ಮೂಗನ್ನು ಒರೆಸಿಕೊಂಡ ನಂತರ

ಪ್ರಾಣಿಯನ್ನು ಅಥವಾ ಪ್ರಾಣಿಯ ತ್ಯಾಜ್ಯವನ್ನು ಮುಟ್ಟಿದ ನಂತರ

ಕಸ ಎಸೆದ ನಂತರ ಕೈ ತೊಳೆಯುವುದನ್ನು ಎಂದೂ ಹಗುರವಾಗಿ ಪರಿಗಣಿಸಬಾರದು.

ಸಾರ್ವಜನಿಕ ಶೌಚಾಲಯವನ್ನು ಉಪಯೋಗಿಸುವ ಎಷ್ಟೋ ಜನ ತಮ್ಮ ಕೈ ತೊಳೆದುಕೊಳ್ಳುವುದೇ ಇಲ್ಲ ಅಥವಾ ಸರಿಯಾಗಿ ತೊಳೆದುಕೊಳ್ಳುವುದಿಲ್ಲ ಎಂದು ಅಧ್ಯಯನಗಳು ತೋರಿಸಿವೆ. ಹಾಗಾದರೆ ನಮ್ಮ ಕೈಯನ್ನು ಹೇಗೆ ತೊಳೆಯಬೇಕು?

ಶುದ್ಧ ನೀರಿನಲ್ಲಿ ಕೈಯನ್ನು ಒದ್ದೆ ಮಾಡಿಕೊಂಡು ಸೋಪು ಹಚ್ಚಿರಿ.

ನೊರೆ ಬರುವವರೆಗೆ ಕೈಯನ್ನು ಚೆನ್ನಾಗಿ ಉಜ್ಜಿರಿ. ಉಗುರುಗಳನ್ನು, ಹೆಬ್ಬೆರಳುಗಳನ್ನು, ಕೈ ಹಿಂಭಾಗವನ್ನು ಮತ್ತು ಬೆರಳುಗಳ ಮಧ್ಯ ಭಾಗವನ್ನೂ ಶುಚಿ ಮಾಡಿಕೊಳ್ಳಿ.

ಕನಿಷ್ಠ ಪಕ್ಷ 20 ಸೆಕೆಂಡುಗಳವರೆಗೆ ನಿಮ್ಮ ಕೈಗಳನ್ನು ಉಜ್ಜುತ್ತಾ ಇರಿ.

ನಂತರ ಶುದ್ಧವಾದ ನೀರಿನಲ್ಲಿ ಚೆನ್ನಾಗಿ ಕೈ ತೊಳೆದುಕೊಳ್ಳಿ.

ಕೈಯನ್ನು ಶುದ್ಧವಾದ ಬಟ್ಟೆಯಿಂದ ಅಥವಾ ಟಿಶ್ಯೂ ಪೇಪರ್‌ನಿಂದ ಒರೆಸಿಕೊಳ್ಳಿ.

ಈ ಕೆಲವೊಂದು ವಿಷಯಗಳನ್ನು ಚಾಚೂ ತಪ್ಪದೆ ಪಾಲಿಸಿದರೆ ಖಾಯಿಲೆಗಳು ಬರದಂತೆ ತಡಗಟ್ಟಬಹುದು.

ವಾಟ್ಸ್ ಆಪ್