ಅಜೀರ್ಣ, ನೆಗಡಿ, ಹಲ್ಲುನೋವು: ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು.

-ಸಂಗ್ರಹ