ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 76 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 30 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ anganwadirecruit.kar.nic.in/ ಸಂಪರ್ಕಿಸಬಹುದು.