ದಾವಣಗೆರೆ : ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು, ದಾವಣಗೆರೆ ತಾಲ್ಲೂಕು ಅಂಗನವಾಡಿಗಳಲ್ಲಿ 13 ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳಿವೆ.

ಕಾರ್ಯಕರ್ತೆಯಾಗಲು ಎಸ್ಸೆಸ್ಸೆಲ್ಸಿ ಹಾಗೂ ಸಹಾಯಕಿಯಾಗಲು ಕನಿಷ್ಟ 4 ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಪಾಸಾಗಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಪೂರೈಸಿರಬೇಕು. ಅದೇ ಗ್ರಾಮದ ಮಹಿಳೆಯಾಗಿರಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 27 ರೊಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು