ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಹೊರಡಿಸಿದ್ದು, ವಿವಿಧ ದೇಶಗಳಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಹೇಳಿದೆ.

ಮೊದಲ ಏಳು ದಿನಗಳ ಅವಧಿಯ ಕ್ವಾರಂಟೈನ್ ವ್ಯವಸ್ಥೆಯ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು. ನಂತರದ ಏಳು ದಿನ ಕಡ್ಡಾಯವಾಗಿ ತಮ್ಮ ಮನೆಯಲ್ಲಿ ಐಸೋಲೇಷನ್ ಗೆ ಒಳಪಡಬೇಕು ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ, ಸೋಮವಾರದಿಂದ ದೇಶಿ ವಿಮಾನಯಾನ ಆರಂಭವಾಗಿದ್ದು, ಆಗಸ್ಟ್ ವೇಳೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭದ ನಿರೀಕ್ಷೆ ಇರುವ ಕಾರಣ ವಿದೇಶಗಳಿಂದ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

(ಸಾಂದರ್ಭಿಕ ಚಿತ್ರ)