ಬೆಂಗಳೂರು: ‘ಅಂಫಾನ್’ ಚಂಡಮಾರುತ ಪ್ರಭಾವದಿಂದಾಗಿ ಮೇ 19 ಮತ್ತು 20 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.!