ನವದೆಹಲಿ : ಪಶ್ಚಿಮ ಬಂಗಾಳದಲ್ಲಿ  ಅಂಫಾನ್ ಚಂಡಮಾರುತ ಅಬ್ಬರಕ್ಕೆ 72 ಮಂದಿ ಬಲಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು, ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕರಾವಳಿ ತೀರ ಪ್ರದೇಶದಲ್ಲಿ ಸುಮಾರು 6 ಸಾವಿರ ಮನೆಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ಅಂಪಾಣ್ ಚಂಡಮಾರುತದಿಂದ ರಾಜ್ಯಕ್ಕೆ 1 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.