ಬೆಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದ ಕಾಲೇಜುಗಳ ಈ ವರ್ಷದ ಶೈಕ್ಷಣಿಕ ತರಗತಿಗಳು ಅಕ್ಟೋಬರ್‌ 1ರಿಂದ ಆರಂಭವಾಗಲಿವೆ ಎಂದು ರಾಜ್ಯ ಸರಕಾರ ಪ್ರಕಟಿಸಿದೆ.

ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್‌ ಮೊದಲ ತಿಂಗಳಿನಿಂದ ಆನ್‌ಲೈನ್‌ ತರಗತಿಗಳು ನಡೆಯಲಿವೆ. ಆದರೆ, ಅಕ್ಟೋಬರ್‌ 1ರಿಂದ ಈ ವರ್ಷದ ಶೈಕ್ಷಣಿಕ ತರಗತಿಗಳು ಎಂದಿನಂತೆ ಜರುಗಲಿವೆ” ಎಂದಿದ್ದಾರೆ ಡಿಸಿಎಂ ಅಶ್ವತ್ಥ್‌ ನಾರಾಯಣ್.

ಪ್ರತಿ ವಿಶ್ವವಿದ್ಯಾಲಯದಲ್ಲೂ ಹೆಲ್ಪ್‌ಲೈನ್‌ ಪ್ರಾರಂಭ ಮಾಡಲಾಗುವುದು, ಈ ಹೆಲ್ಪ್‌ಲೈನ್‌ ಮೂಲಕ ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು. ಇದರ ಮೂಲಕ ಅಗತ್ಯ ಮಾಹಿತಿಯನ್ನೂ ಸಂಗ್ರಹಿಸಲಾಗುವುದು ಎಂದು ಅಶ್ವತ್ಥ್‌ ನಾರಾಯಣ್ ತಿಳಿಸಿದರು.