ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯುವ ಸಾದ್ಯತೆಇದೆ. ಏಕೆಂದರೆ ಚುನಾವಣಾ ಆಯೋಗದ ವತಿಯಿಂದ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ.!

ಸರಕಾರ ಗ್ರಾ.ಪಂ. ಚುನಾವಣೆಯನ್ನು ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನ್ಯಾಯಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. ಈ ವೇಳೆ ಚುನಾವಣಾ ಆಯೋಗದ ವತಿಯಿಂದ ಪಂಚಾಯಿತಿ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಜುಲೈ 25ಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ನೋಟಿಫಿಕೇಶನ್ ಕಾರ್ಯ ಮುಕ್ತಾಯವಾಗಲಿದೆ. ಸೆಪ್ಟೆಂಬರ್ ವೇಳೆಗೆ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಲಿದ್ದು, ಇದಾದ ನಂತರ 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗುವುದು. ಕೊರೋನಾ ಪರಿಸ್ಥಿತಿ ಆಧರಿಸಿ ಅಕ್ಟೋಬರ್ ಮೊದಲ ವಾರದ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ವತಿಯಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ. !