ದಾವಣಗೆರೆ: ಎರಡು ಕಡೆಗಳಲ್ಲಿ ಎಸಿಬಿ ದಾಳಿಯಲ್ಲಿ ಅಕ್ರಮ ಆಸ್ತಿ ಸಂಪಾದನೆಮಾಡಿದ್ದ ಇಬ್ಬರು ಅಧಿಕಾರಿಗಳು ಬಲೆಗೆ ಬಿದಿದ್ದಾರೆ.

ಶಿಕಾರಿಪುರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಎಫ್‌ ಡಿ ಎ ಆಗಿರುವ ಚನ್ನಪ್ಪ ಮನೆ ಹಾಗೂ ಮಲೆಬೆನ್ನೂರಿನಲ್ಲಿ ಡಿಸಿಸಿ ಬ್ಯಾಂಕ್ ಅಸಿಸ್ಟಂಟ್ ಮ್ಯಾನೇಜರ್ ಆಗಿರುವ ಭೀಮನಗೌಡ.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ದಾವಣಗೆರೆಯ ಆಜಾದ್ ನಗರದಲ್ಲಿರುವ ಚನ್ನಪ್ಪ ನಿವಾಸ, ಎಸ್ ಎಸ್ ಲೇಔಟ್ ನಲ್ಲಿರುವ ಭೀಮನಗೌಡನ ಮನೆ ಮೇಲೆ ಎಸಿಬಿ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ.