ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 27, 2020ರ ವರೆಗೆ ವಿಸ್ತರಣೆ ಮಾಡಲಾಗಿದೆ, ‘

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82, ಅಗ್ನಿಶಾಮಕರ 1222 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಜುಲೈ 27, 2020ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 20 ಕ್ಕೆ ಇದ್ದ ಅವಧಿಯನ್ನು 27 ರವರೆಗೆ ವಿಸ್ತರಿಸಲಾಗಿದೆ