ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದವರಿಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಮುಂದಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ಮತ್ತು ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 532 ಮಂದಿ ಅಟೆಂಡರ್ ಗಳಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಇವರುಗಳು ಬಡ್ತಿ ಪಡೆಯಲಿದ್ದಾರೆ.

ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಶೇಕಡಾ 33 ಅನುಪಾತದಂತೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಅವಕಾಶವಿದ್ದು, ಹೀಗಾಗಿ ಅಟೆಂಡರ್ ಗಳ ಮಾಹಿತಿ ಕಳುಹಿಸಿಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಪ್ರಾದೇಶಿಕ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ.