ಚಿತ್ರದುರ್ಗ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ ಮತ್ತು ದಾಳಿಂಬೆ ಬೆಳೆಗಳಿಗೆ ವಿಮಾ ಕಂತು ಪಾವತಿಸಲು ಕೊನೆಯ ದಿನಾಂಕವನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ವಿಮಾ ಮೊತ್ತ ಪಾವತಿಸಲು ಜೂ. 30 ಕೊನೆಯ ದಿನವಾಗಿತ್ತು, ಇದೀಗ ಅವಧಿಯನ್ನು ಜು. 10 ರವರೆಗೆ ವಿಸ್ತರಿಸಿರುವುದರಿಂದ, ಚಿತ್ರದುರ್ಗ ಜಿಲ್ಲೆಯ ಅಡಿಕೆ ಮತ್ತು ದಾಳಿಂಬೆ ಬೆಳೆಗಾರರಿಗೆ ವಿಮಾ ಕಂತು ಮೊತ್ತ ಪಾವತಿಸಲು ಅವಕಾಶ ದೊರೆತಂತಾಗಿದೆ. ಈ ಅವಕಾಶವನ್ನು ಜಿಲ್ಲೆಯ ರೈತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರಾದ ಸವಿತಾ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
No comments!
There are no comments yet, but you can be first to comment this article.