ಬೆಂಗಳೂರು : ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರವು ನೆಮ್ಮದಿಯ ಸುದ್ದಿಯೊಂದು ನೀಡಿದ್ದು, ಅಡಕೆಗೆ ಎದುರಾಗಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹೊಸದಾಗಿ ಅಡಕೆ ಟಾಸ್ಕ್ ಪೋರ್ಸ್ ರಚನೆ ಮಾಡಿದೆ.

ಭಾರತವು ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧವಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದು, ಕಾರ್ಯಪಡೆಯ ಜವಾಬ್ದಾರಿ ಹೆಚ್ಚಿದ್ದು, ಆರ್ ಸಿಇಪಿ ಒಪ್ಪಂದಿದಂದ ಅಡಕೆಯನ್ನು ಹೊರಗಿಡಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹೊಣೆಗಾರಿಕೆ ಈ ಕಾರ್ಯಪಡೆಯ ಮೇಲೆ ಬಿದ್ದಿದೆ.

ರಾಜ್ಯ ಸರ್ಕಾರವು ಸದ್ಯ ಅಡಕೆ ಟಾಸ್ಕ್ ಫೋರ್ಸ್ ರಚನೆ ಮಾಡಿರುವುದು ಅಡಕೆ ಬೆಳೆಗಾರರಿಗೆ ಸಮಾಧಾನ ಮೂಡಿಸಿದ್ದು, ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕು.