ಬೆಂಗಳೂರು : ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಉಳಿದಿರುವ ಗೌರವ ವೇತನವನ್ನು ಬಿಡುಗಡೆ ಮಾಡಿದೆ.

ಹೌದು, 2019-20 ನೇ ಸಾಲಿನ ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನವನ್ನು ಹಣಕಾಸು ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ.

ಈ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ ಎನ್ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದು, ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು, ಮುಂದಿನ ವಾರ ಉಪನ್ಯಾಸಕರಿಗೆ ಹಣ ನೀಡಲಾಗುವುದು ಎಂದರು.