ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಖುಷಿ ಸುದ್ದಿ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನವನ್ನು ಐದು ಸಾವಿರ ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದ್ದು, ಡಿಪ್ಲೋಮಾ, ಐಟಿಐ ಹಾಗೂ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ 26 ಸಾವಿರ ಮಂದಿ ಅತಿಥಿ ಉಪನ್ಯಾಸಕರು ಇದರ ಪ್ರಯೋಜನ ಪಡೆಯಲಿದ್ದಾರೆ.!

ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಶಿಕ್ಷಣ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.