ಕೋಲಾರ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ವಿಭಾಗಗಳಿಗೆ 2020-21 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ ಅಥವಾ ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಲಾ ವಿಭಾಗದ ಎಂ.ಎ ಕನ್ನಡ, ಇಂಗ್ಲೀಷ್, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಕಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. ವಿಜ್ಞಾನ ವಿಭಾಗದ ಎಂ.ಎಸ್ಸಿ ಗಣಿತಶಾಸ್ತ್ರ, ಗಣಕವಿಜ್ಞಾನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಸ್ಯಶಾಸ್ತ್ರ ಮತ್ತು ಭೌತಶಾಸ್ತ್ರ. ಎಂ.ಕಾಂ. ಬಿ.ಎಡ್ ಪದವಿಗಳಿಗೆ ಬೋಧನೆ ಮಾಡುವ ಅತಿಥಿ ಉಪನ್ಯಾಸಕರು ಬೋಧನಾ ಕಾರ್ಯಭಾರಕ್ಕನುಗುಣವಾಗಿ Phd ಅರ್ಹತೆಯನ್ನು ಹೊಂದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ ವಿಳಾಸ http://bnu.ac.in ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಆಡಳಿತ ಕಛೇರಿ), ಶ್ರೀ ದೇವರಾಜ ಅರಸು ಬಡಾವಣೆ, ಟಮಕ, ಕೋಲಾರ ಇಲ್ಲಿಗೆ ಸೆಪ್ಟೆಂಬರ್ 8 ರ ಸಂಜೆ 5.00 ಗಂಟೆಯರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.