ಧಾರವಾಡ; ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2020-21ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರು, ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಮೊದಲು ಜೂನ್ 22 ರಂದು ಅರ್ಜಿ ಆಹ್ವಾನಿಸಿ ಅರ್ಜಿ ಸಲ್ಲಿಕೆಗೆ 5 ದಿನ ಕಾಲಾವಕಾಶ ನೀಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 7 ರವರೆಗೆ ವಿಸ್ತರಿಸಲಾಗಿದೆ.