ನವದೆಹಲಿ: ಅತೀ ವೆಗವಾಗಿ  ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿ ಸಾವನ್ನಪ್ಪಿದರೆ ವಿಮಾ ಪರಿಹಾರ ಇಲ್ಲಾ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿರುವುದು ದೃಢಪಟ್ಟಲ್ಲಿ ಗಾಯಾಳು ಚಾಲಕ ಅಥವಾ ಮೃತ ಚಾಲಕನ ಕುಟುಂಬ ವಿಮಾ ಹಣಕ್ಕಾಗಿ ಬೇಡಿಕೆ ಸಲ್ಲಿಸುವ ಅರ್ಹತೆ ಕಳೆದುಕೊಳ್ಳುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇಂತಹ ಪ್ರಕರಣಗಳಲ್ಲಿ ವಿಮಾ ಕಂಪನಿಗಳು ವಿಮೆ ಪರಿಹಾರ ನೀಡಬೇಕಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್‌ ನಜೀರ್‌ ಮತ್ತು ಎನ್‌.ವಿ. ರಮಣ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.!