ಬೆಂಗಳೂರು: ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯವನ್ನು ಕಾಪಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರಂತೆ.

ರಾಜ್ಯ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ನಂತರ ಅತೃಪ್ತ ಶಾಸಕರ ಹಿತ ಕಾಪಾಡುವ ವಿಚಾರದಲ್ಲಿ ಯಡಿಯೂರಪ್ಪ ಇಂದು ರಾಜ್ಯದ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, 15 ಅತೃಪ್ತ ಶಾಸಕರಿಗೆ ಮುಂದಿನ ರಾಜಕೀಯ ಭವಿಷ್ಯ ಕಾಪಾಡುವ ಭರವಸೆಯನ್ನು ಕೊಟ್ಟಿದ್ದಾರಂತೆ