ಮುಂಬೈ: ಇಂದು ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ನ 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ, ಸ್ಪೀಕರ್ ತೀರ್ಪುನ ಬಗ್ಗೆ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ನಮ್ಮ ರಾಜೀನಾಮೆ ಕುರಿತು ಹೆಚ್ಚಾಗಿ ಪ್ರಸ್ತಾಪಿಸಲಾಗಿಲ್ಲ, ಇದು ಬಹಳ ಅವಸರದಲ್ಲಿ, ಅನರ್ಹತೆಯ ಆಧಾರದ ಮೇಲೆ ತೀರ್ಪು ನೀಡಲಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ವಾದವನ್ನು ಮಂಡಿಸುತ್ತೇವೆ ಎಂದು ಅತೃಪ್ತ ಶಾಸಕರು ಹೇಳಿದ್ದಾರೆ.