ಬೆಂಗಳೂರು: ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಟಾರ್ಗೆಟ್ ಎಂದು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಜನರೇ ಅನರ್ಹರಿಗೆ ತಕ್ಕ ಉತ್ತರ ನೀಡಲಿದ್ದಾರೆ. ದೇಶ ಮತ್ತು ರಾಜ್ಯದ ಹಿತಕ್ಕಾಗಿ ಅವರನ್ನು ಸೋಲಿಸಬೇಕಿದೆ. ಇವರು ಮೂವರು ಜೆಡಿಎಸ್ ನಾಯಕರ ಮನೆಗಳಿಗೆ ಗೂಂಡಾಗಳನ್ನು ಕಳುಹಿಸಿ, ಇಬ್ಬರನ್ನು ಹೆದರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ ಎಂದರು.