ನವದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ನ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ನಿಂದ ಮತ್ತೊಂದು ಆಘಾತ ಎದುರಾಗಿದೆ.

ಉಪ ಚುನಾವಣೆ ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಅನರ್ಹ ಶಾಸಕರು ಅರ್ಜಿಯನ್ನು ಸಲ್ಲಿಸಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಡಿ.5ರಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ.

ಈ ಮೂಲಕ ಸೋಮವಾರದಿಂದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗುವ ಹಿನ್ನೆಲೆಯಲ್ಲಿ ಅನರ್ಹರು ಆತಂಕಕ್ಕೆ ಒಳಗಾಗಿದ್ದಾರೆ.