ಬೆಂಗಳೂರು: ಬಿಎಸ್ ವೈ ಆಡಿಯೋ ಬಿಡುಗಡೆಯಾಗುತ್ತಿದಂತೆ ಅನರ್ಹ ಶಾಸಕರ ಪ್ರಕರಣಕ್ಕೆ ತಿರುವು ದೊರೆತಿದೆ.

ಬಿಎಸ್ ವೈ ಆಡಿಯೋವನ್ನು ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎಂದು ಸುಪ್ರೀಂ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ. ಇನ್ನು,  ಶಾಸಕರ ಅನರ್ಹತೆ ಪ್ರಕರಣದ ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ವಿಶ್ವಾಸವಿದೆ.

ಆಮಿಷಗಳಿಗೆ ಒಳಗಾಗಿ ಆಯ್ಕೆಯಾದ ಪಕ್ಷಕ್ಕೆ ದ್ರೋಹ ಮಾಡಿದವರಿಗೆ, ರಾಜಕೀಯದಲ್ಲಿರುವ ನೈತಿಕತೆ ಇರುವುದಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.