ನವದೆಹಲಿ : ಕೇಂದ್ರ ಸರ್ಕಾರ ಹೊಸದಾಗಿ ಅನ್‌ಲಾಕ್‌ 3.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ , ಸರಕು ಸಾಗಣೆ ಮತ್ತು ಜನರ ಪ್ರಯಾಣಕ್ಕೆ ಅನಗತ್ಯ ನಿರ್ಬಂಧಗಳನ್ನು ವಿಧಿಸದಂತೆ ನಿರ್ದೇಶನ ನೀಡಿದ್ದಾರೆ.

ಅಂತರ-ರಾಜ್ಯ, ಅಂತರ-ಜಿಲ್ಲೆ ಸರಕು ಸಾಗಣೆ ಮತ್ತು ಜನರ ಪ್ರಯಾಣಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನೂ ರದ್ದುಪಡಿಸಿದೆ. ಅಂತರ ರಾಜ್ಯಗಳ ಪ್ರಯಾಣಕ್ಕೆ ನಿರ್ಬಂಧ ಹೇರಿದರೆ ಅದು ಆರ್ಥಿಕ ಚಟುವಟಿಕೆ ಮತ್ತು ಉದ್ಯೋಗದ ಮೇಲೆ ಪರಿಣಾಮ ಬೀರಲಿದೆ ಎಂದಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ, ಅಂತರ ರಾಜ್ಯ ಪ್ರಯಾಣಕ್ಕೆ ಸ್ಥಳೀಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ಕೂಡ ತಿಳಿಸಿದ್ದಾರೆ.