ಕಾರ್ಕಳ; ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವಾಗ ಸಿಕ್ಕಿಬಿದ್ದಲ್ಲಿ ಅವರ ಪೋಷಕರ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಕಾರ್ಕಳ ನಗರ ಹಾಗೂ ಗ್ರಾಮಾಂತರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಜ. 12ರಂದು ಕಾರು ಮತ್ತು ಟೆಂಪೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಕಾರು ಚಲಾಯಿಸುತ್ತಿದ್ದು, ಇದರಿಂದ ಎರಡೂ ವಾಹನಗಳಿಗೂ ಹಾನಿಯುಂಟಾಗಿದೆ. ಈ ಕುರಿತು ಟೆಂಪೋ ಚಾಲಕ ನಗರ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೆತ್ತಿಕೊಂಡ ನಗರ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಸಿನ ಕಾರು ಚಾಲಕನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ ಬಳಿಕ ನಗರದಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.