ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 11 ರಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಮಳೆ ಕುರಿತು ಮುಂಜಾಗೃತಾ ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.