ಬೆಂಗಳೂರು : ಸಾರಿಗೆ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಹಾಗೂ ಐವರು ಐಎಎಸ್ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ.

ಹೆಚ್.ಎಂ ರೇವಣ್ಣ ಅವರು ಸಚಿವರಾಗಿದ್ದ ಆರು ತಿಂಗಳ ಅವಧಿಯಲ್ಲಿ ಸಾರಿಗೆ ನಿಗಮದಲ್ಲಿ 1600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್. ರಮೇಶ್ ಅವರು ದೂರು ಸಲ್ಲಿಸಿದ್ದಾರೆ.

ಬಸ್ ಖರೀದಿ ಹಾಗೂ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ದಾಖಲೆಗಳನ್ನು ರಮೇಶ್ ಎಸಿಬಿಗೆ ಸಲ್ಲಿಸಿದ್ದು, ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.