ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗಿದೆ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿನ್ನೆ ತೀವ್ರ ಅನಾರೋಗ್ಯದಿಂದ ಶ್ರೀಗಳು ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು.

ಹೊಟ್ಟೆಯಲ್ಲಿ ತೀವ್ರ ರಕ್ತ ಸ್ರಾವವಾಗಿ ನಿನ್ನೆ ದಾಖಲಾಗಿರುವ ಶ್ರೀಗಳನ್ನು ವೈದ್ಯರು ಕಾಲಕಾಲಕ್ಕೆ ನಿಗಾವಹಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.