ಚಿತ್ರದುರ್ಗ: ಅಕ್ಟೋಬರ್ 18ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್,ಡಿಎಆರ್) ಮತ್ತು ಕಲ್ಯಾಣ ಕರ್ನಾಟಕ (ಸಿಎಅರ್,ಡಿಎಆರ್) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದೆ.

 ಚಿತ್ರದುರ್ಗ ನಗರದಲ್ಲಿ ಒಟ್ಟು 27 ಶಾಲಾ, ಕಾಲೇಜುಗಳಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ  ಹಾಜರಾಗುವ ಅಭ್ಯರ್ಥಿಗಳು ಯಾವುದೇ ರೀತಿಯ ಪುಸ್ತಕಗಳನ್ನಾಗಲೀ, ಕೈಬರಹ ಚೀಟಿಗಳನ್ನಾಗಲೀ, ಪೇಜರ್‍ಗಳನ್ನಾಗಲೀ, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್ ಫೋನ್‍ಗಳನ್ನು ಪರೀಕ್ಷೆಗೆ ತರಲು ನಿಷೇಧಿಸಲಾಗಿರುತ್ತದೆ.

ಅಭ್ಯರ್ಥಿಗಳು ಬೆಲೆ ಬಾಳುವ ವಸ್ತು, ಸಾಮಾಗ್ರಿಗಳನ್ನು ತರದಂತೆ ತಿಳಿಸಲಾಗಿದ್ದು, ತಮ್ಮ ವಸ್ತುಗಳಿಗೆ ತಾವೇ ಜವಾಬ್ದಾರರಾಗಿರುತ್ತೀರಿ. ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ತಮ್ಮ ಕರೆ ಪತ್ರದಲ್ಲಿ ನಮೂದಾಗಿರುವ ಕಾಲೇಜಿನಲ್ಲಿ ಹಾಜರಿರಲು ಹಾಗೂ ಕರೆ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಮತ್ತು ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.