ಬೆಂಗಳೂರು : ಅಕ್ಟೋಬರ್ 4 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದ್ದು, ಒಟ್ಟು 604 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಈ ಬಾರಿ ಪತ್ರಿಕೆ-1 ಕ್ಕೆ 74,977 ಮತ್ತು ಪತ್ರಿಕೆ -2 ಕ್ಕೆ 1,69,71 ಸೇರಿ ಒಟ್ಟಾರೆ 2,44,693 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಕೊರೊನಾ ಸೋಂಕಿತ ಅಭ್ಯರ್ಥಿಗಳಿಗೂ ಪರೀಕ್ಷೆಗೆ ಪ್ರವೇಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಇಲಾಖೆ ಸೂಚಿಸಿದ್ದು, ವಿದ್ಯಾರ್ಥಿಗಳು ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕಗಳನ್ನು ನಮೂದಿಸಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಬಹುದು

(ಸಾಂದರ್ಭಿಕ ಚಿತ್ರ)