ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಇಂದು ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆಗಸ್ಟ್‌ 15ರಂದು ದೇಶದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಬಹುದೆಂದು ಹೇಳಿದೆ.

ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಮಾಸ್ಕ್‌ ಧರಿಸುವುದು ಸೇರಿದಂತೆ ಆರೋಗ್ಯ ಸಂಬಂಧಿಸಿದ ನಿಯಮಗಳನ್ನು ಅನುಸರಿಸಬೇಕಾಗುತ್ತದೆ ಎಂದು ಸಚಿವಾಲಯವು ತಿಳಿಸಿದೆ.