ಉಡುಪಿ: ರಾಜ್ಯದಲ್ಲಿ ಆಗಸ್ಟ್ ವರೆಗೆ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆಯಂತೆ ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ನಾಳೆಯಿಂದ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಲಾಗುವುದು. ಪೋಷಕರಿಗೆ ಯಾವಾಗ ಶಾಲೆ ಪ್ರಾರಂಭಿಸಬೇಕು/ಹೇಗೆ ನಡೆಸಬೇಕು? ಎಂಬ ಪ್ರಶ್ನೆಗಳನ್ನು ಕೇಳುವ ಮೂಲಕ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳುತ್ತೇವೆ ಎಂದರು.