ಚಿತ್ರದುರ್ಗ: 2018 ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಯನ್ನು ಆಗಸ್ಟ್ 19 ರಂದು ನಿಗದಿಪಡಿಸಲಾಗಿದೆ. ಚಿತ್ರದುರ್ಗದ ಡಾನ್‍ಬೊಸ್ಕೋ ಸೊಸೈಟಿ, ಸರ್ಕಾರಿ ಕಲಾ ಕಾಲೇಜ್, ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ವಿಜ್ಞಾನ ಕಾಲೇಜ್, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಸೇಂಟ್ ಜೋಸೆಫ್ ಬಾಲಕಿಯರ ಪ್ರೌಢಶಾಲೆ, ಎಸ್.ಜೆ.ಎಂ. ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಸ್.ಜೆ.ಎಂ. ಇನಸ್ಟಿಟ್ಯೂಟ್ ಆಫ್ ಪಾಲಿಟೆಕ್ನಿಕ್, ಬಸವೇಶ್ವರ ಮೆಡಿಕಲ್ ಕಾಲೇಜ್, ಚಿನ್ಮೂಲಾದ್ರಿ ಹೈಸ್ಕೂಲ್ ಇವುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.