ಬೆಂಗಳೂರು: ಸಿಇಟಿ ಫಲಿತಾಂಶವನ್ನು ಇದೇ 20ರ ಒಳಗೆ ಪ್ರಕಟಿಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ರಾಜ್ಯದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಎಂದಿನಂತೆಯೇ ನಡೆಯಲಿದೆ. ಸಿಇಟಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸೀಟು ಹಂಚಿಕೆಗೆ ಆನ್‌ಲೈನ್‌ ಕೌನ್ಸೆಲಿಂಗ್‌ ನಡೆಸುವುದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.