ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೌರಸಂದ್ರ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಆಗಸ್ಟ್ 24 ರಿಂದ 26 ರವರೆಗೆ ನಡೆಯಬೇಕಿದ್ದ ಜಾತ್ರಾ ಮಹೋತ್ಸವನ್ನು ರದ್ದು ಪಡಿಸಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

  ಕೋವಿಡ್-19 ಸ್ಫೋಟ ಮತ್ತು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಗೌರಸಂದ್ರ ಗ್ರಾಮದ ಪ್ರವರ್ಗ “ಬಿ” ವರ್ಗದ ಅಧಿಸೂಚಿತ ದೇವಾಲಯವಾದ ಮಾರಮ್ಮ ದೇವಾಲಯದಲ್ಲಿ ಆಗಸ್ಟ್ 24 ರಿಂದ 26 ರವೆರೆಗೆ ನಡೆಯಲಿರುವ ಜಾತ್ರಾ ಮಹೋತ್ಸವವನ್ನು ರದ್ದು ಪಡಿಸಿ ಆದೇಶಿಸಲಾಗಿದೆ.

 ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ದೇವಾಲಯದ ದೈನಂದಿನ ಪೂಜಾ ಕಾರ್ಯ ಮತ್ತು ದೇವರ ದರ್ಶನಕ್ಕೆ ಮಾತ್ರ ಭಕ್ತಾಧಿಗಳಿಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದ್ದಾರೆ.