ತಿರುಪತಿ: ಆಂಧ್ರ ಪ್ರದೇಶದ ತಿರುಪತಿಯಲ್ಲಿ ಕೊರೋನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 5 ರವರೆಗೆ ತಿರುಪತಿಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಟಿಟಿಡಿ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ಈವರೆಗೆ 140 ಮಂದಿ ಟಿಟಿಡಿ ಸಿಬ್ಬಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.