ಬೆಂಗಳೂರು: ರಾಜ್ಯ ಸರ್ಕಾರವು 7.50 ಲಕ್ಷ ಆಟೋ-ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂ. ಪ್ಯಾಕೇಜ್ ಘೋಷಣೆ ಮಾಡಿ ಆರು ತಿಂಗಳು ಕಳೆದರೂ 2.14 ಲಕ್ಷ ಚಾಲಕರಿಗೆ ಮಾತ್ರ ಹಣ ನೀಡಿರುವ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು. ಇದಕ್ಕೆ ಸ್ಪಂದಿಸಿದ ಸ್ಪೀಕರ್ ತಾಂತ್ರಿಕ ಸಮಸ್ಯೆ ಬಗೆಹರಿಸಿ ಚಾಲಕರು, ಮಾಲೀಕರ ಸಂಘದ ಸದಸ್ಯರ ಜೊತೆ ಸಭೆ ನಡೆಸಿ ಎಂದು ಸರ್ಕಾರಕ್ಕೆ ಸೂಚನೆ ನೀಡಿದರು.

ಸ್ಪೀಕರ್ ಸೂಚನೆ ಮೇರೆಗೆ ಮತ್ತು ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು 5 ಸಾವಿರ ರೂ. ಸಹಾಯಧನಕ್ಕೆ ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸುವ ಭರವಸೆ ನೀಡಿದ್ದಾರೆ.