ಬೆಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ 5 ಸಾವಿರ ರೂ. ಪರಿಹಾರಧನವನ್ನು ಆನ್ ಲೈನ್ ಸೇವಾಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸ್ವೀಕರಿಸಿ ನೇರವಾಗಿ ಚಾಲಕರ ಖಾತೆಗೆ ಪಾವತಿಸುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ.

ಚಾಲಕರು ಪರಿಹಾರಧನಕ್ಕಾಗಿ ಅರ್ಜಿ ಸಲ್ಲಿಸಲು ಎಲ್ಲಿಗೂ ಹೋಗಬೇಕಾಗಿಲ್ಲ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅರ್ಹ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರಧನವನ್ನು ನೇರವಾಗಿ ಅವರ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಲಾಕ್ ಡೌನ್ ನಿಂದ ಕಷ್ಟದಲ್ಲಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ರೂ.ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಹೀಗಾಗಿ ಆಟೋ, ಟ್ಯಾಕ್ಸಿ ಚಾಲಕರು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪರಿಹಾರಧನವನ್ನು ಪಡೆದುಕೊಳ್ಳಬಹುದಾಗಿದೆ.