ಬೆಂಗಳೂರು: ಆಪರೇಷನ್ ಕಮಲದ ಆಡಿಯೊ ಪ್ರಕರಣವನ್ನು ಎಸ್ ಐಟಿಗೆ ವಹಿಸಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ಖರೀದಿಯ ವಸ್ತುಗಳಾಗುವುದನ್ನು ಶಾಶ್ವತವಾಗಿ ತಪ್ಪಿಸಲು ಆಡಿಯೊ ಪ್ರಕರಣವನ್ನು ಎಸ್ ಐಟಿಗೆ ನೀಡಿದ್ದೇನೆ ಎಂದರು.

ನನ್ನನ್ನು ಸೇರಿದಂತೆ ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗದೆ ಪ್ರಾಮಾಣಿಕವಾಗಿ ತನಿಖೆ ನಡೆಸಿ, ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.