ಬೆಂಗಳೂರು:. ಪಡಿತರ ಚೀಟಿ ಇಲ್ಲದವರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿ ಪಡೆಯಬಹುದಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಪಡಿತರ ಚೀಟಿ ಇಲ್ಲದವರಿಗೆ ಮೇ 26 ರಿಂದ 31 ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸಲಿದ್ದು, ಪಡಿತರ ಚೀಟಿ ಇಲ್ಲದವರು ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ 5 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಜೂನ್ 1 ರಿಂದ 10 ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಪ್ರತಿ ಕುಟುಂಬದವರಿಗೆ 2 ಕೆಜಿ ಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು ಎಂದರು.