ನವದೆಹಲಿ: ಆಧಾರ್ ಕಾರ್ಡ್ ಜೋಡಣೆ ಮಾಡದ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದು ಅಥವಾ ಫಲಾನುಭವಿಗಳ ಹೆಸರನ್ನು ತೆಗೆದುಹಾಕಲಾಗುವುದು, ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ಜೋಡಣೆ ಮಾಡದ ಪಡಿತರ ಚೀಟಿದಾರರಿಗೆ ಪಡಿತರ ನೀಡುವುದಿಲ್ಲ ಎಂಬ ವದಂತಿಗಳು ಹರಡಿದ್ದವು.

ಇದರಿಂದಾಗಿ ಆತಂಕದಲ್ಲಿದ್ದ ಪಡಿತರ ಚೀಟಿದಾರರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೆಮ್ಮದಿ ಸುದ್ದಿ ನೀಡಿದೆ. ಆಧಾರ್ ಲಿಂಕ್ ಮಾಡಿಲ್ಲವೆಂಬ ಕಾರಣಕ್ಕೆ ಪಡಿತರ ಸಿಗಲ್ಲವೆಂಬ ಆತಂಕ ಬೇಡ. ಆಧಾರ್ ಜೋಡಣೆ ಮಾಡದಿದ್ದರೂ ಪಡಿತರ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.