ಬೆಂಗಳೂರು: ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸಲು ಶೀಘ್ರದಲ್ಲೇ ಕಾನೂನು ರೂಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆನ್‌ಲೈನ್‌ ಗೇಮ್‌ಗಳಂತಹ ದುಶ್ಚಟಗಳಿಗೆ ಯುವಜನರು ಬಲಿಯಾಗುತ್ತಿದ್ದಾರೆ. ಪರಿಣಾಮವಾಗಿ ಅವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಈ ಪರಿಸ್ಥಿತಿ ತಪ್ಪಿಸಲು ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.