ಬೆಂಗಳೂರು : ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ರಾಜ್ಯ ಹೈಕೋರ್ಟ್ ನ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ. ಇದೇ ವೇಳೆ ನ್ಯಾಯಪೀಠ ಸದ್ಯದ ಪರಿಸ್ಥಿತಿಯಲ್ಲಿ ಆನ್ ಲೈನ್ ಶಿಕ್ಷಣ ಮಾತ್ರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಇನ್ನೂ ಶಾಲೆಗಳಿಂದ ಆನ್‌ಲೈನ್‌ ಮಾದರಿಯನ್ನು ಕಡ್ಡಾಯವ ಮಾಡುವುದ ಅನವಶ್ಯಕ, ಇದಲ್ಲದೇ ಇದಕ್ಕಾಗಿ ಹೆಚ್ಚಿನ ಶುಲ್ಕವನ್ನು ಕೂಡ ಪಡೆಯುವಂತಿಲ್ಲ ಅಂತ ಹೇಳಿದೆ. ಆನ್‌ಲೈನ್‌ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸರ್ಕಾರದ ನಿಲುವನ್ನು ಒಪ್ಪಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸರ್ಕಾರ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕು ಅಂತ ಹೇಳಿತು.