ಬೆಂಗಳೂರು: ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣವನ್ನು ದುಡ್ಡುಮಾಡುವ ಹೊಸ ದಂಧೆಯಾಗಿ ಮಾಡಿಕೊಂಡಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇನ್ನು ಪ್ರಾಥಮಿಕ ಹಂತದಲ್ಲಿಯೇ ಶುರುವಾಗಿರುವ ಈ ದಂಧೆಯನ್ನು ಈ ಹಂತದಲ್ಲಿಯೇ ನಿಯಂತ್ರಿಸುವ ಕೆಲಸಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಮುಂದಾಗಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.