ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ ಯೋಜನೆ ಫಲಾನುಭವಿಗಳಿಗೆ ಖಾಸಗಿ ಪ್ರಯೋಗಾಲಯಗಳ ಜೊತೆಗೆ ಯೋಜನೆಯಡಿ ಗುರುತಿಸಲಾಗಿರುವ ಎಲ್ಲ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಸಿಗಲಿದೆ.

ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ, ಈಗಾಗಲೇ ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಶಂಕಿತರು ಹಾಗೂ ಸೋಂಕಿತರಿಗೆ ಉಚಿತ ಪರೀಕ್ಷೆ ಮತ್ತು ಚಿಕಿತ್ಸಾ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ವೈರಸ್ ಗೆ ಚಿಕಿತ್ಸೆ ನೀಡುವುದರಿಂದ ಬಡವರ ಮೇಲಿನ ಹೊರೆ ತಗ್ಗುವುದಲ್ಲದೆ ಎಲ್ಲರಿಗೂ ಚಿಕಿತ್ಸೆ ದೊರೆಯುವಂತಾಗುತ್ತದೆ ಎಂದು ಹೇಳಿದೆ.