ಬೆಂಗಳೂರು: ನವೋದಯ ಸರ್ವಿಸ್ ಸೆಂಟರ್ ವತಿಯಿಂದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಯೋಜನೆಗಳಡಿಯಲ್ಲಿ, ಹೊರ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ನಗರದ ವಿವಿಧ ಆಸ್ಪತ್ರೆಗಳಿಗೆ ಆರೋಗ್ಯಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 200 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ಇ-ಮೇಲ್ ವಿಳಾಸ navodaya.sast@gmail.comಗೆ ಕಳುಹಿಸಬೇಕು.